ಬೆಂಗಳೂರು : ದ್ವಿತೀಯ ಪಿಯುಸಿ ಹಾಗೂ ಎಸೆಸ್ಸೆಲ್ಸಿ ಅಂತಿಮ ಪರೀಕ್ಷಾ ದಿನಾಂಕ ಪ್ರಕಟ ವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಎಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023-2024 ನೇ ಸಾಲಿನ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮಾ.1 ರಿಂದ ಮಾ.22 ರವರೆಗೆ ದ್ವಿತೀಯ ಪಿಯುಸಿ ಮತ್ತು ಮಾ.25 ರಿಂದ ಎ.6 ರವರೆಗೆ ಎಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.